ಬೆಂಗಳೂರು: ವಿಧಾನಸಭಾ ಚುನಾವಣೆಗೆ 43 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಇಂದು (ಶನಿವಾರ) ಪ್ರಕಟಿಸಿದೆ.

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎನ್ನಲಾದ ಕೋಲಾರ ಕ್ಷೇತ್ರದಿಂದ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅರಸಿಕೆರೆಯಿಂದ ಶಿವಲಿಂಗೇಗೌಡ ಅವರು ಕಣಕ್ಕಿಳಿಯಲಿದ್ದಾರೆ.

ತೇರದಾಳ ಕ್ಷೇತ್ರದಿಂದ ಮಾಜಿ ಸಚಿವೆ, ನಟಿ ಉಮಾಶ್ರೀ ಅವರು ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದ್ದು, ಸಿದ್ದಪ್ಪ ರಾಮಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಹಾಸನದಿಂದ ಬನವಾಸಿ ರಂಗಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಿಂದ ಆರ್.ವಿ.ದೇವರಾಜ್‌ಗೆ ಟಿಕೆಟ್ ನೀಡಲಾಗಿದೆ. ಚಿಕ್ಕಪೇಟೆ ಆಕಾಂಕ್ಷಿಯಾಗಿದ್ದ ಮಾಜಿ ಮೇಯರ್ ಗಂಗಾಂಬಿಕೆ ಅವರಿಗೆ ನಿರಾಸೆಯಾಗಿದೆ. ಅವರು ಈಗಾಗಲೇ ನಾಮಪತ್ರವನ್ನೂ ಸಲ್ಲಿಸಿದ್ದಾರೆ.

224 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈವರೆಗೆ 209 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ. ಇತ್ತ ಬಿಜೆಪಿ 212 ಹಾಗೂ ಜೆಡಿಎಸ್ 143 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.