ಬೆಂಗಳೂರು: ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸಲು ವಿವಿಧ ಕಡೆಗಳಿಂದ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದ ಸ್ವಾಮೀಜಿಗಳಿಗೆ ‘ಕವರ್’ (ಲಕೋಟೆ) ಹಂಚಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು; ಅವಧಿ ಪೂರ್ಣಗೊಳಿಸುವ ಮುನ್ನವೇ ಅವರನ್ನು ಪದಚ್ಯುತಿಗೊಳಿಸಿದರೆ ಸಹಿಸಲಾಗದು. ಸಾಮೂಹಿಕವಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಅನೇಕ ಮಠಾಧೀಶರು ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕೃತ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಎರಡು ದಿನಗಳಿಂದ ಮಠಾಧೀಶರ ಸಮಾವೇಶವೇ ನಡೆಯುತ್ತಿದೆ. ಅಲ್ಲಿ ಸೇರಿದ್ದ ಕೆಲವು ಸ್ವಾಮೀಜಿಗಳಿಗೆ ಯಡಿಯೂರಪ್ಪ ಅವರ ಸಮ್ಮುಖದಲ್ಲೇ ಲಕೋಟೆ ಹಂಚುತ್ತಿರುವ ವಿಡಿಯೊ ಹರಿದಾಡುತ್ತಿದೆ. ಆ ಲಕೋಟೆಯಲ್ಲಿ ಏನಿದೆ ಎಂಬ ಕುತೂಹಲಕಾರಿ ಚರ್ಚೆಯೂ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.