ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಏರುಗತಿ ಪಡೆದಿದ್ದು, ಗುರುವಾರ 14,738 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 11 ಲಕ್ಷದ ಗಡಿ ದಾಟಿದೆ.

ಒಂದು ದಿನದ ಅವಧಿಯಲ್ಲಿ 1.29 ಲಕ್ಷ ಮಾದರಿ ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 11.38ಕ್ಕೆ ಏರಿಕೆಯಾಗಿದೆ. ಈ ತಿಂಗಳು 15 ದಿನಗಳಲ್ಲಿಯೇ 1.12 ಲಕ್ಷಕ್ಕೂ ಅಧಿಕ ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಲಕ್ಷದತ್ತ (96,561) ದಾಪುಗಾಲು ಇರಿಸಿದೆ. ಮಾರ್ಚ್ ತಿಂಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕೆ ಇಳಿಕೆಯಾಗಿತ್ತು. ಈಗ ಅಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವು ಮಹಾರಾಷ್ಟ್ರ, ಛತ್ತೀಸಗಡದ ನಂತರದ ಸ್ಥಾನದಲ್ಲಿದೆ.

ರಾಜ್ಯದ 16 ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿದ್ದು, 10,497 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಕಲಬುರ್ಗಿ (624), ತುಮಕೂರು (387), ಬೀದರ್ (363), ಮೈಸೂರು (327), ಮಂಡ್ಯ (211), ಬಳ್ಳಾರಿ (200) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಸೋಂಕು ಪೀಡಿತರಲ್ಲಿ ಬೆಂಗಳೂರಿನಲ್ಲಿ 30 ಮಂದಿ ಸೇರಿದಂತೆ ರಾಜ್ಯದಲ್ಲಿ 66 ಮಂದಿ ಸಾವಿಗೀಡಾಗಿದ್ದಾರೆ. ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ 6 ಮಂದಿ, ಮೈಸೂರಿನಲ್ಲಿ ಐವರು, ಹಾಸನದಲ್ಲಿ 4 ಮಂದಿ, ಧಾರವಾಡದಲ್ಲಿ ಮೂವರು, ಬೀದರ್, ಉತ್ತರ ಕನ್ನಡ ಹಾಗೂ ತುಮಕೂರಿನಲ್ಲಿ ತಲಾ ಇಬ್ಬರು, ಬೆಳಗಾವಿ, ಕಲಬುರ್ಗಿ, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈ ತಿಂಗಳು 545 ಮಂದಿ ಕೋವಿಡ್ನಿಂದ ಸಾವಿಗೀಡಾಗಿರುವುದು ಖಚಿತಪಟ್ಟಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 13,112ಕ್ಕೆ ತಲುಪಿದೆ.

ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಸಹ ಹೆಚ್ಚಳವಾಗಿದೆ. ಸದ್ಯ 555 ಮಂದಿ ಐಸಿಯುನಲ್ಲಿ ಇದ್ದಾರೆ. ಕೋವಿಡ್ ಪೀಡಿತರಲ್ಲಿ 3,591 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 10 ಲಕ್ಷದ ಗಡಿ (9.99 ಲಕ್ಷ) ಸಮೀಪಿಸಿದೆ. ರಾಜ್ಯದಲ್ಲಿ ಗುರುವಾರ 3,548 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಿಸಲಾಗಿದೆ. ಈವರೆಗೆ 62.74 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.