ಧಾರವಾಡ: ಹಿರಿಯ ವಿಮರ್ಶಕ ಡಾ. ಜಿ.ಎಸ್.ಆಮೂರ (96) ಸೋಮವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ವಯೋಸಹಜ ನಿಶಕ್ತಿಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ಮಗನ ಮನೆಯಲ್ಲಿದ್ದರು.

ಇತ್ತೀಚೆಗೆ ಅವರು ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು.ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ಟಿ, ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.

1925ರ ಮೇ 8ರಂದು ಧಾರವಾಡ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ಜನಿಸಿದ ಆಮೂರರು, ಪ್ರಾಧ್ಯಾಪಕ ರಾಗಿ ವೃತ್ತಿ ಜೀವನ ಆರಂಭಿಸಿದವರು. ಕನ್ನಡ, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.