ಮುಖ್ಯಮಂತ್ರಿ @BSBommai ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? 2/7
ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ʼವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ ʼಕೊಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮನಿರಪೇಕ್ಷತೆ ತತ್ತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ. 4/7
ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ @BJP4Karnataka ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ. 6/7