ಬೆಂಗಳೂರು: ಬಿಜೆಪಿ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮತ್ತು ಅವರ ಪುತ್ರಿ ವಿಜೇತಾ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

‘ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ’ ಎಂದು ವಿಜೇತಾ ಟ್ವೀಟ್ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ವಿಜೇತಾ ನನ್ನ ಸಹೋದರಿ ಸಮಾನರು. ಅವರಿಗೆ ಧನ್ಯವಾದಗಳು. ಈ ಮಾತು ನಮ್ಮ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ’ ಎಂದಿದ್ದಾರೆ.

ಓದಿ:ಜೆಡಿಎಸ್ ಪ್ರಬಲ ರಾಜಕೀಯ ಶಕ್ತಿ ಎಂದ ಅನಂತಕುಮಾರ್ ಪುತ್ರಿ: ಎಚ್‌ಡಿಕೆ ಅಭಿನಂದನೆ

ಜತೆಗೆ, ವಿಜೇತಾ ಹಾಗೂ ಅವರ ತಾಯಿ ತೇಜಸ್ವಿನಿ ಅನಂತ್ ಕುಮಾರ್ ಅವರು ಪಕ್ಷಕ್ಕೆ ಬಂದರೆ ಸ್ವಾಗತ. ಬಿಜೆಪಿಯಂತೂ ಅವರನ್ನು ಗುರುತಿಸಿಲ್ಲ. ಮುಂದೆ ರಾಜಕಾರಣದಲ್ಲಿ ಅನೇಕ ಬದಲಾವಣೆಗಳಾಗಲಿವೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹೇಳಿದ್ದಾರೆ.

‘ಕರ್ನಾಟಕದ ರಾಜಕೀಯ ಏಕೆ ಕುತೂಹಲಕರವಾಗಿದೆ ಗೊತ್ತಾ? ಏಕೆಂದರೆ, ಜೆಡಿಎಸ್ ಇನ್ನೂ ಬಲಿಷ್ಠ ರಾಜಕೀಯ ಪಕ್ಷವಾಗಿ ಉಳಿದಿದೆ’ ಎಂದು ವಿಜೇತಾ ಟ್ವೀಟ್ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.