ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರ ಮೂಲಕ ದೂರು ಸಲ್ಲಿಸಿದ್ದಾರೆ.

‘ಯುವತಿ ತಮ್ಮ ಕೈಯಿಂದ ಬರೆದಿರುವ ದೂರಿನ ಪ್ರತಿಯನ್ನು ನಮಗೆ ತಲುಪಿಸಿದ್ದಾರೆ. ಇದನ್ನೇ ಕಮಿಷನರ್ ಅವರಿಗೆ ನೀಡಿ, ಮುಂದಿನ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದೇನೆ’ ಎಂದು ಜಗದೀಶ್ ಕುಮಾರ್ ತಿಳಿಸಿದರು.

‘ಯುವತಿಗೆ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆ ಇದೆ. ಅವರಿಗೆ ಸೂಕ್ತ ಭದ್ರತೆ ನೀಡಬೇಕು. ನಂತರವೇ ಯುವತಿ, ಕಮಿಷನರ್ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ’ ಎಂದೂ ಹೇಳಿದ್ದಾರೆ.

ಇದನ್ನೂ ಓದಿ... ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್: ಲೈಂಗಿಕ ದೌರ್ಜನ್ಯ ದೂರು ದಾಖಲು

ದೂರಿನಲ್ಲಿ ಏನಿದೆ?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನೊಂದಿಗೆ ಲೈಂಗಿಕ ಸಂಪರ್ಕ ಮಾಡಿದ್ದಾರೆ. ವಿಡಿಯೊ ಕರೆ ಮೂಲಕ ನಗ್ನವಾಗಿ, ಅಶ್ಲೀಲವಾಗಿ ಮಾತನಾಡಲು ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು ನೀಡುತ್ತಿದ್ದಾನೆ ಎಂದು ಯುವತಿ ಹೇಳಿದ್ದಾರೆ.

‘ನಾನು ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕಿಕೊಂಡು ಬಂದು ನೆಲೆಸಿದ್ದು, ಕಿರುಚಿತ್ರ ಮಾಡುವ ಸಲುವಾಗಿ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಅವರನ್ನು ಒಮ್ಮೆ ಭೇಟಿ ಮಾಡಿದ್ದೆ. ನಂತರ ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದರು. ನಂತರ ಅವರು ಕರೆ ಮಾಡಿ ನನ್ನ ಬಗ್ಗೆ ಮತ್ತು ಕುಟುಂಬದ ಬಗ್ಗೆ ವಿಚಾರಿಸಿ ಸಲುಗೆಯಿಂದ ಮಾತನಾಡಲು ಆರಂಭಿಸಿದರು.
ಸಚಿವರು ನನ್ನನ್ನು ಅಷ್ಟು ಕಾಳಜಿಯಿಂದ ಮಾತನಾಡಿಸಿದ್ದು, ನನಗೆ ತುಂಬಾ ಖುಷಿಯಾಯಿತು. ಹಾಗಾಗಿ ಅವರನ್ನು ಗೌರವದಿಂದ ಮಾತನಾಡಿಸಿದೆ. ಅಗಾಗೆ ನನಗೆ ಕರೆ ಮಾಡಿ ಮಾತನಾಡಲು ಆರಂಭಿಸಿದರು. ನನಗೆ ತಮ್ಮ ಪ್ರಭಾವ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿದರು. ಬದಲಾಗಿ ನೀನು ನನ್ನ ಜೊತೆಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಕೇಳಿದರು.

ಇದನ್ನೂ ಓದಿ... ಸಿಡಿ ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವಕೀಲ ಜಗದೀಶ್

ಅವರನ್ನು ಟಿವಿಗಳಲ್ಲಿ ನೋಡಿದ್ದು, ಮಂತ್ರಿ ಈ ರೀತಿ ಹೇಳಿದ ಮೇಲೆ ಕೆಲಸ ಕೊಟ್ಟೇ ಕೊಡಿಸುತ್ತಾರೆ ಎಂದು ನಂಬಿದೆ. ನನ್ನ ಬಳಿ ಹಣವಿಲ್ಲದಿರುವುದನ್ನು ಮುಂಚೆಯೇ ತಿಳಿದುಕೊಂಡಿದ್ದ ಅವರು ಹಣದ ಬದಲು ಅವರ ಜೊತೆಗೆ ಸಹಕರಿಸಿ ಖುಷಿ ನೀಡಬೇಕು ಎಂದು ಕೇಳಿದ್ದರಿಂದ ನಂಬಿ ಅವರು ಕೇಳಿದಂತೆ ನಡೆದುಕೊಂಡು ಬಂದಿದ್ದೇನೆ. ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದೇನೆ ಎಂದು ವಿಡಿಯೊ ಕರೆ ಮಾಡಿ ನನ್ನೊಂದಿಗೆ ಲೈಂಗಿಕ ವಿಚಾರಗಳನ್ನು ಮಾತನಾಡಿದ್ದರು. ನಾನು ಅವರು ಹೇಳಿದಂತೆಯೇ ಮಾಡಿದ್ದೇನೆ.

ನಂತರ ಬೆಂಗಳೂರಿಗೆ ಬಂದು ನನ್ನ ನಿವಾಸಕ್ಕೆ ಬಾ ನಿನ್ನ ಕೆಲಸ ವಿಚಾರವಾಗಿ ಮಾತನಾಡಬೇಕು ಎಂದರು. ನಾನು ಅವರು ಹೇಳಿದ ಅಪಾರ್ಟ್‌ಮೆಂಟ್‌ಗೆ ಎರಡು ಬಾರಿ ಹೋಗಿದ್ದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ನಡೆದುಕೊಂಡರು. ನಾನು ಎದುರು ಮಾತನಾಡಲು ಹೆದರಿ ಅವರು ಕೇಳಿದಂತೆ ಮಾಡಿರುತ್ತೇನೆ. ನಂತರ ಸರ್ಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ವಲ್ಪ ಹಣ ಬೇಕಾದರೆ ಕೇಳು ಕೆಲಸದ ಬಗ್ಗೆ ಆಮೇಲೆ ನೋಡೋಣ ಎಂದು ಅವಾಯ್ಡ್ ಮಾಡುತ್ತಿದ್ದರು.

ಇದನ್ನೂ ಓದಿ... ಸಿ.ಡಿ. ಪ್ರಕರಣ ಸಂಬಂಧ ರಮೇಶ ಜಾರಕಿಹೊಳಿ ವಿರುದ್ಧ ವಕೀಲರ ಮೂಲಕ ದೂರು: ಯುವತಿ

ಇದಾದ ಕೆಲ ದಿನಗಳ ಬಳಿಕ ವಿಡಿಯೊಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ನಾನು ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡದಂತೆ ಈ ರೀತಿ ಕುತಂತ್ರವನ್ನು ಮಾಡಿದ್ದಾರೆ. ಹಣವಂತರು, ಪ್ರಭಾವಿಗಳಾದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನನಗೂ ಮತ್ತು ಕುಟುಂಬಸ್ಥರಿಗೂ ಜೀವ ಬೆದರಿಕೆ ಇದೆ.

ನಾನು ದೂರು ನೀಡದಂತೆ ತಡೆಯಲು ಮತ್ತು ಅವರ ಕೈಗೆ ಸಿಕ್ಕರೆ ಕೊಂದು ಬಿಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ. ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಕೆಲಸ ಕೊಡಿಸದೆ ಮೋಸ ಮಾಡಿರುವ ರಮೇಶ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ.

ನಾನು ನೇರವಾಗಿ ಯಾವ ಪೊಲೀಸ್ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ ತೇಜೋವಧೆ ಮಾಡುತ್ತಿದ್ದಾರೆ. ನನಗೆ ಸಹಾಯ ಮಾಡಿದವರಿಗೆ ಮತ್ತು ಅವರ ಕುಟುಂಬಸ್ಥರಿಗೆ ಹಿಂಸೆ ಕೋಡುತ್ತಿರುವುದರಿಂದ ಬಹಳ ನೋವಾಗಿದೆ.

ಇದನ್ನೂ ಓದಿ... ಸಿಡಿ ಪ್ರಕರಣದ ಷಡ್ಯಂತ್ರ ಕುರಿತು ಬೆಚ್ಚಿ ಬೀಳಿಸುವ ಮಾಹಿತಿ ಸಿಕ್ಕಿದೆ: ಜಾರಕಿಹೊಳಿ

ನನಗೆ ಭದ್ರತೆ ಇಲ್ಲದೆ ಕಾರಣ ಕೈಯಲ್ಲಿ ಬರೆದು ಈ ದೂರನ್ನು ನನಗೆ ಪರಿಚಿತ ವಕೀಲರಾದ ಜಗದೀಶ್ ಅವರ ಮೂಲಕ ಕಳುಸುತ್ತಿದ್ದೇನೆ. ರಮೇಶ ಜಾರಕಿಹೊಳಿ ಮತ್ತು ಅವರ ಕಡೆಯವರಿಂದ ನಮಗೆ ಯಾವುದೇ ಅಪಾಯವಾಗದಂತೆ ರಕ್ಷಣೆ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.