ಬೆಳಗಾವಿ: ‘ವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಮಾತನಾಡಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿರುವ ಅವರು, ‘ವಿದೇಶದಲ್ಲಿನ ಹಾಗೂ ಭಾರತದಲ್ಲಿನ ವೈದ್ಯಕೀಯ ಶಿಕ್ಷಣಕ್ಕಾಗಿ ತಗಲುವ ವೆಚ್ಚ ಎಷ್ಟೇ ಇರಲಿ ಆ ಕುರಿತು ಈಗ ವಿವರವಾದ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ’ ಎಂದಿದ್ದಾರೆ.

ಕೀವ್ ತೊರೆದ ಭಾರತೀಯರು; ತೆರವು ಕಾರ್ಯಾಚರಣೆಗೆ 26 ವಿಮಾನಗಳ ಹಾರಾಟ: ಕೇಂದ್ರ

‘ವೈದ್ಯಕೀಯ ಪದವಿಗೆ ಭಾರತದಲ್ಲಿ ಜಾಸ್ತಿ ಖರ್ಚಾಗುತ್ತದೆ, ಉಕ್ರೇನ್‌ನಲ್ಲಿ ಕಡಿಮೆ ಖರ್ಚಾಗುತ್ತದೆ ಹೀಗಾಗಿ ಹೋಗುತ್ತಾರೆ ಎಂಬ ಮಾತಿದೆಯಲ್ಲಾ’ ಎಂಬ ಪ್ರಶ್ನೆಗೆ, ‘ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ಈಗ ಬಯಸುವುದಿಲ್ಲ. ಅಲ್ಲಿ ಕಲಿತು ಬಂದವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹಾರೈಸಬಲ್ಲೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.