ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕುರಿತ ರಾಜ್ಯ ಸರ್ಕಾರದಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕಡೆಗಣನೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.

‘ಇಡೀ ದೇಶ ಸ್ವಾಂತಂತ್ರ್ಯ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿ, ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಈ ವಿಚಾರದಲ್ಲಿ ಅಧಿಕಾರರೂಢ ಸರ್ಕಾರದ ಜವಾಬ್ದಾರಿ ಒಂದು ಪಟ್ಟು ಹೆಚ್ಚಾಗಿಯೇ ಇರುತ್ತದೆ’ ಎಂದಿದ್ದಾರೆ.

‘ಆದರೆ, ಭಾನುವಾರದಿನಪತ್ರಿಕೆಗಳಲ್ಲಿ ಬಂದಿರುವ ಸರ್ಕಾರಿ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ, ದೇಶದ ಮೊದಲ ಪ್ರಧಾನಿ, ಸ್ವಾತಂತ್ರೋತ್ತರ ನವಭಾರತ ನಿರ್ಮಾಣದ ಶಿಲ್ಪಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಿದ್ದೀರಿ. ಆ ಮೂಲಕ ಇತಿಹಾಸ ತಿರುಚುವ ವಿಫಲ ಯತ್ನ ಮಾಡಿದ್ದೀರಿ’ ಎಂದು

‘ಮುಖ್ಯಮಂತ್ರಿ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು. ಇದು ತಮ್ಮ ಆತ್ಮಸಾಕ್ಷಿಗೆ ಶೋಭೆ ತರುವ ಕೆಲಸವಲ್ಲ’ ಎಂದಿದ್ದಾರೆ.

‘ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನೆಹರು ಅವರು ಅಸಹಕಾರ ಚಳವಳಿ, ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳವಳಿ ಸೇರಿದಂತೆ ಪ್ರತಿ ಹಂತದಲ್ಲೂ ತಮ್ಮ ಬದುಕು ಮುಡಿಪಿಟ್ಟವರು. ಅಲ್ಲದೆ ಸ್ವಾತಂತ್ರ್ಯ ಹೋರಾಟಕ್ಕಾಗಿ 9 ವರ್ಷಗಳ ಸೆರೆವಾಸವನ್ನು ನೆಹರು ಅವರು ಅನುಭವಿಸಿದ್ದರು’ ಎಂದಿದ್ದಾರೆ.

ಸ್ವಾತಂತ್ರ್ಯ ಹೋರಾಟ, ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ ನಾವು ನೀವು ಬೆಳೆದಿದ್ದೇವೆ. ಆದರೂ ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು. ಇದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಆಗಿರುವ ಪ್ರಮಾದಕ್ಕೆ ನೀವು ಕ್ಷಮೆ ಯಾಚಿಸಬೇಕು. ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು’ ಎಂದು ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಟಿಪ್ಪು ಸುಲ್ತಾನ್ ಫ್ಲೆಕ್ಸ್ಹರಿದಿದ್ದ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.