ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ. ಅವರು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.

* ರೈತರಿಗೆ ನೀಡಲಾಗುತ್ತಿದ್ದ ₹3 ಲಕ್ಷ ಬಡ್ಡಿ ರಹಿತ ಸಾಲ ₹5 ಲಕ್ಷ ರೂಪಾಯಿಗೆ ಹೆಚ್ಚಳ.

* ರಾಜ್ಯದಲ್ಲಿ ಕಾರ್ಮಿಕರ 19 ವಿಮಾ ಆಸ್ಪತ್ರೆ ಆರಂಭ.

* ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

* ಎಸ್–ಎಸ್ಟಿಗೆ ವಸತಿ ಯೋಜನೆಯಡಿ ನೀಡಲಾಗುತ್ತಿದ್ದ ಘಟಕ ಸಹಾಯಧನ ₹1.5 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಳ.

* ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿ.

* ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ರೈತರಿಗೆ ₹10 ಸಾವಿರ ಸಹಾಯಧನ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲ.

* ಸಣ್ವ, ಅತಿ ಸಣ್ಣ ರೈತರಿಗಾಗಿ ₹180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ ಘೋಷಣೆ.

* ಗೃಹಿಣಿ ಶಕ್ತಿ ಯೋಜನೆ ಘೋಷಣೆ. ಭೂರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ₹ 500 ಸಹಾಯ ಧನ

* ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ 'ವಿದ್ಯಾವಾಹಿನಿ' ಯೋಜನೆ ಅಡಿಯಲ್ಲಿ ₹ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ

* ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್, 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್.

* ನೇಕಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ.

* ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ

* 73 ಕರ್ನಾಟಕ ಪಬ್ಲಿಕ್ ಶಾಲೆ ಮತ್ತು 50 ಆದರ್ಶ ವಿದ್ಯಾಲಯ ಸ್ಥಾಪನೆ

* ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ. 75 ಜಂಕ್ಷನ್ ಅಭಿವೃದ್ಧಿ.

* ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರಿನಲ್ಲಿ ₹6,000 ಕೋಟಿ ಕಾಮಗಾರಿಗಳಿಗೆ ಒತ್ತು.

* ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ತಾಯಿ ಮತ್ತು ಮಗು ಮನೆಗೆ ತೆರಳಲು ನಗು–ಮಗು ವಾಹನ.

* ಗ್ರಾಮ ಪಂಚಾಯ್ತಿ ಸದಸ್ಯರು, ಅತಿಥಿ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿ, ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಸಹಾಯಕರ ಗೌರವ ಧನ ₹1000 ಹೆಚ್ಚಳ.

* ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ತೃತೀಯ ಹಂತದ ಆರೈಕೆ ಒದಗಿಸಲು ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಹಾಗೂ ದೊಡ್ಡಬಳ್ಳಾಪುರದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಸ್ಥಾಪನೆ.

* ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ₹5 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ.

* ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹100 ಕೋಟಿ.

* ಕೇಂದ್ರದ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟ ಅಭಿವೃದ್ಧಿ.

* 2.35 ಲಕ್ಷ ವಿದ್ಯುತ್ ಸಂಪರ್ಕರಹಿತ ಮನೆಗಳಿಗೆ ₹ 124 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ

* ಪೌರ ಆಸರೆ ಯೋಜನೆ– 5 ಸಾವಿರ ವಸತಿರಹಿತ ಪೌರ ಕಾರ್ಮಿಕರಿಗಾಗಿ ₹ 3 ಸಾವಿರ ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣ

*ರಾಜ್ಯ ಕೋರ್ ನೆಟ್ವರ್ಕ್ ಜಾಲದಲ್ಲಿ 1,700 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹2000 ಕೋಟಿ ಅನುದಾನ ನೀಡಲಾಗಿದೆ. ಇಲ್ಲಿದೆ ಸಮಗ್ರ ಮಾಹಿತಿ

*ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ₹100 ಕೋಟಿ ಅನುದಾನ ಮೀಸಲಿಡಲಾಗಿದೆ. ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಗಳು ಏನು? ಇಲ್ಲಿದೆ ಸಮಗ್ರ ಮಾಹಿತಿ

*ನೀರಾವರಿ ಕ್ಷೇತ್ರಕ್ಕೆ ₹25,000 ಕೋಟಿ ಅನುದಾನ ಘೋಷಿಸಲಾಗಿದೆ. ಇಲ್ಲಿದೆ ಸಮಗ್ರ ಮಾಹಿತಿ

ಬಜೆಟ್ ಗಾತ್ರ: ₹ 3,09,182 ಕೋಟಿ

ವಲಯವಾರು ಹಂಚಿಕೆ
* ಕೃಷಿ ಮತ್ತು ಪೂರಕ ಚಟುವಟಿಕೆ: 39,031 ಕೋಟಿ
* ಸರ್ವೋದಯ ಮತ್ತು ಕ್ಷೇಮಾಭಿವೃದ್ಧ: 80,318 ಕೋಟಿ
* ಆರ್ಥಿಕ ಅಭಿವೃದ್ಧಿ ಉತ್ತೇಜನ: 61,488 ಕೋಟಿ
* ಬೆಂಗಳೂರು ಸಮಗ್ರ ಅಭಿವೃದ್ಧಿ: ₹ 9,698 ಕೋಟಿ
* ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ: ₹ 3,458
* ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ: ₹ 68,585 ಕೋಟಿ

ಆಯವ್ಯಯ ಪಕ್ಷಿನೋಟ

* ಆಯವ್ಯಯ ಗಾತ್ರ (ಸಂಚಿತ ನಿಧಿ)- ₹3,09,182 ಕೋಟಿ
* ಒಟ್ಟು ಸ್ವೀಕೃತಿ- ₹3,03,910 ಕೋಟಿ
* ರಾಜಸ್ವ ಸ್ವೀಕೃತಿ ₹2,25,910 ಕೋಟಿ
* ಸಾರ್ವಜನಿಕ ಋಣ- ₹77,750 ಕೋಟಿ ಸೇರಿದಂತೆ ಬಂಡವಾಳ ಸ್ವೀಕೃತಿ ₹78,000 ಕೋಟಿ

ಒಟ್ಟು ವೆಚ್ಚ- ₹3,03,910 ಕೋಟಿ
* ರಾಜಸ್ವ ವೆಚ್ಚ- ₹2,25,507 ಕೋಟಿ
* ಬಂಡವಾಳ ವೆಚ್ಚ- ₹61,234 ಕೋಟಿ ಹಾಗೂ ಸಾಲ ಮರುಪಾವತಿ ₹22,441 ಕೋಟಿ.

ಇವುಗಳನ್ನೂ ಓದಿ..

ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ! ಬೊಮ್ಮಾಯಿ ಏನಂದ್ರು?

ರಾಜ್ಯ ಬಜೆಟ್ 2023: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ₹9,698 ಕೋಟಿ ಅನುದಾನ

ಬಜೆಟ್: ರೈತರಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ; ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ರಾಜ್ಯ ಬಜೆಟ್ನಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿಗೆ: ಯಡಿಯೂರಪ್ಪ

ರಾಜ್ಯ ಬಜೆಟ್–2023: ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ Live

ಕರ್ನಾಟಕ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಗಳು ಏನು?

ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಜೆಟ್ನಲ್ಲಿ ಪ್ರಸ್ತಾಪಿಸಿದ ಅಂಶಗಳು

Karnataka Budget 2023: ಯಾವ ವಲಯಕ್ಕೆ ಎಷ್ಟು ಅನುದಾನ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.