ಬೆಂಗಳೂರು: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಲ್ಯಾಣ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ರಾಜ್ಯಪಾಲರಾಗಿಯೂ ಅವರು ಸೇವೆಯನ್ನು ಸಲ್ಲಿಸಿದ್ದಾರೆ. ಅಂಥ ಮೇಧಾವಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.