ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ಕಂದಾಯ ಸಚಿವ ಆರ್.ಅಶೋಕ ಅವರನ್ನು ಭೇಟಿ ಮಾಡಿದ್ದರು. ಬಳಿಕ ಅವರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದರು.

ತಾವು ಬಿಜೆಪಿ ಸೇರುತ್ತಿರುವುದು ನಿಜ. ನಾಳೆಯೇ ಸೇರ್ಪಡೆಗೊಳ್ಳಲಿದ್ದೇನೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್‌ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಆರಂಭದಲ್ಲಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದರು ಮತ್ತು ಪಕ್ಷದಲ್ಲೂ ಸಕ್ರಿಯರಾಗಿದ್ದರು. ಆದರೆ ಕಳೆದ ಒಂದೆರಡು ತಿಂಗಳಿಂದ ಅವರು ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ.

ಇವನ್ನೂ ಓದಿ...

* ಸಂಪುಟ ಸ್ಥಾನಗಳಿಗೆ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ: ಕೇಜ್ರಿವಾಲ್ ಅಂಗೀಕಾರ

* ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಸೋಡಿಯಾಗೆ ಹಿನ್ನಡೆ

* ಚುನಾವಣಾ ರಾಜಕೀಯದಿಂದ ನಿವೃತ್ತಿ: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಘೋಷಣೆ

* ಜಾತ್ರೆಯಲ್ಲಿ ಅಶ್ಲೀಲ ನೃತ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ವಿರುದ್ಧ ಬಿಜೆಪಿ ಕಿಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.