ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ @BJP4Karnataka ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ. 1/7#SaveSchoolspic.twitter.com/laX9Dkv7ZI
ಒಂದೆಡೆ ರಾಜ್ಯ @BJP4Karnataka ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. 2/7#SaveSchoolspic.twitter.com/ayLN3J6LSX
ಇಂದಿನ ದಿನದ ವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು @BJP4Karnataka ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ. 3/7#SaveSchools