ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಈವರೆಗೆ 105 ಶಾಸಕರು ಮತ ಚಲಾವಣೆ ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 9ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದೆ. ಈವರೆಗೆ ಬಿಜೆಪಿಯ 75, ಕಾಂಗ್ರೆಸ್‌ನ 23 ಮತ್ತು ಜೆಡಿಎಸ್‌ನ 7 ಶಾಸಕರು ಮತದಾನ ಮಾಡಿದ್ದಾರೆ.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆ ಇಂದು: ‘ಅಡ್ಡ’ ಮತದಾನ ಯಾರಿಗೆ ಹಿತ?

ರಾಜ್ಯದಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳ ಆಯ್ಕೆ ನಿರಾತಂಕವಾಗಿದೆ. ನಾಲ್ಕನೇ ಸ್ಥಾನಕ್ಕೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪರಸ್ಪರ ‘ಸಹಕಾರ’ ನೀಡದಿರುವ ಬಗ್ಗೆ ಬಿಗಿ ನಿಲುವು ತಳೆದಿವೆ. ಇದರ ಪರಿಣಾಮ ಶುಕ್ರವಾರ ನಡೆಯುವ ಮತದಾನ ವೇಳೆ ‘ಅಡ್ಡ ಮತದಾನ’ ಹಾಗೂ ಕೊನೆ ಕ್ಷಣದ ನಾಟಕೀಯ ಬೆಳವಣಿಗೆಗಳ ಸಾಧ್ಯತೆ ದಟ್ಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.