ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ (ಜೂ.18) ಪ್ರಕಟವಾಗಲಿದೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಳಿಗ್ಗೆ 11ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆ www.karresults.nic.in ವೆಬ್‌ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು.

ಏ.22ರಿಂದ ಮೇ 18ರವರೆಗೆ ರಾಜ್ಯದ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,84,255 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿದ್ದರು. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಎಸ್‌ಎಂಎಸ್ ಮೂಲಕ ಫಲಿತಾಂಶವನ್ನು ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷೆಗೂ ಹಿಜಾಬ್ ತೊಟ್ಟುಕೊಂಡು ಹಾಜರಾಗಲು ಅವಕಾಶ ನೀಡಬೇಕು ಎಂದು ಕೆಲವು ವಿದ್ಯಾರ್ಥಿನಿಯರು ಪಟ್ಟು ಹಿಡಿದ ಕಾರಣ ಗೊಂದಲ ಸೃಷ್ಟಿಯಾಗಿತ್ತು.ಹೈಕೋರ್ಟ್ ತೀರ್ಪಿನ ಅನ್ವಯ ಹಿಜಾಬ್ ತೊಟ್ಟು ಬರಲು ಸರ್ಕಾರ ಅವಕಾಶ ನೀಡಲಿಲ್ಲ. ಇದರಿಂದ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿರಲಿಲ್ಲ. ಅಲ್ಲದೆ, ಈ ಬಾರಿ ಪರೀಕ್ಷೆಗೆ ಗೈರು ಹಾಜರಾದ ಇತರ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.