ಬೆಂಗಳೂರು: 9ನೇ ತರಗತಿ ಸಮಾಜ ವಿಜ್ಞಾನ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ಪುನರ್ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ಕೈಬಿಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ: ಮೌಖಿಕ ಸೂಚನೆ ಕೊಟ್ಟ ಸಚಿವ ನಾಗೇಶ್?

9ನೇ ತರಗತಿ ಸಮಾಜ ವಿಜ್ಞಾನದ ಭಾಗ 1ರ ‘ನಮ್ಮ ಸಂವಿಧಾನ’ ಪಾಠದಲ್ಲಿ ಸಂವಿಧಾನದ ಕರಡು ರಚನೆ ಬಗ್ಗೆ ಉಲ್ಲೇಖವಿದೆ. ಪರಿಷ್ಕೃತ ಪಠ್ಯದಲ್ಲಿ ‘ಇವರು ಸಂವಿಧಾನ ರಚನೆಗೆ ನೀಡಿರುವ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನ ಶಿಲ್ಪಿ’ ಎಂದು ಕರೆಯಲಾಗಿದೆ’ ಎಂಬ ವಾಕ್ಯವು ಇಲ್ಲವಾಗಿದೆ. ಇದರ ಪುನರ್ ಸೇರ್ಪಡೆ ಮಾಡಿ ತಿದ್ದೋಲೆ ಹೊರಡಿಸುವಂತೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅದೇ ರೀತಿ, 7ನೇ ತರಗತಿ ಸಮಾಜ ವಿಜ್ಞಾನ ಭಾಗ 1ರ ಭಕ್ತಿ ಪಂಥ ಹಾಗೂ ಸೂಫಿ ಸಂತರ ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿತ್ತು. ಇದನ್ನು ಸೇರ್ಪಡೆಗೊಳಿಸಿ ತಿದ್ದೋಲೆ ಹೊರಡಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದಕ್ಕೆ ಕೊಕ್: ಡಿ.ಕೆ. ಶಿವಕುಮಾರ್ ಕಿಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.