ಬೆಂಗಳೂರು: ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ, ಅವರು ಇದು ಅತ್ಯಂತ ಖಂಡನೀಯ ಸಂಗತಿ.

ಇದನ್ನೂ ಓದಿ: ಕನ್ನಡ ಕೆಟ್ಟ ಭಾಷೆ ಎಂದ ವೆಬ್ಸೈಟ್: ನೆಟ್ಟಿಗರ ಹೋರಾಟಕ್ಕೆ ಮಣಿದ ಗೂಗಲ್

ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ,

ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇಗೂಗಲ್ ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.