ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇದೇ ಶುಕ್ರವಾರ ಮಧ್ಯಾಹ್ನ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಲೋಕಸಭೆಯ ಅಧ್ಯಕ್ಷ ಓಂ ಬಿರ್ಲಾ ಅವರು, ‘ಪ್ರಜಾಪ್ರಭುತ್ವ: ಸಂಸದೀಯ ಮೌಲ್ಯಗಳ ರಕ್ಷಣೆ’ ಕುರಿತು ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ವಿಧಾನಸಭೆಯ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 2.30ರಿಂದ ಜಂಟಿ ಅಧಿವೇಶನ ಆರಂಭವಾಗಲಿದೆ.

ಇದೇ ಸಂದರ್ಭದಲ್ಲಿ ವಿಧಾನಸಭೆಯ ಶಾಸಕರೊಬ್ಬರಿಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಂತರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡುವರು. ಕೊನೆಯಲ್ಲಿ ಓಂ ಬಿರ್ಲಾ ಅವರು ಭಾಷಣ ಮಾಡುವರು ಎಂದು ವಿಧಾನಮಂಡಲದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.