ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸರಣಿ ಹತ್ಯೆ ಪ್ರಕರಣವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದುವೇ ಸಾಕ್ಷಿ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಸುರತ್ಕಲ್ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸುರತ್ಕಲ್: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್ ಎಂಬ ಯುವಕನ ಬರ್ಬರ ಹತ್ಯೆ

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿದೆ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಎಂದು ಆರೋಪಿಸಿದರು.

ಓದಿ...ಪ್ರತಿ ಕೊಲೆಗೂ ಸರ್ಕಾರವೇ ಮುಂದೆ ನಿಂತು ಹೊಸ ಟ್ವಿಸ್ಟ್ ನೀಡುತ್ತಿದೆ: ಕುಮಾರಸ್ವಾಮಿ

ಗೃಹ ಸಚಿವರನ್ನು ತಕ್ಷಣ ಕಿತ್ತು ಹಾಕಿ...
ಅಸಮರ್ಥ ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ಹೇಳಿದ್ದಾರೆ.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಕಳವಳ ವ್ಯಕ್ತಪಡಿಸಿದರು.

ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.