ಕಲಬುರಗಿ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂಬ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಹೀಗಾಗಿ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ಹೊರಬಿದ್ದ ಬಳಿಕ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬಿಸಿ ಮೀಸಲಾತಿ ಇಲ್ಲದೇ ಚುನಾವಣೆ ನಡೆಸಬಾರದು ಅನ್ನುವುದು ನಮ್ಮ ನಿರ್ಧಾರ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ಯಾವಾಗ ಚುನಾವಣೆ ನಡೆಯುತ್ತದೆ ಅನ್ನುವುದನ್ನು ಈಗಲೇ ಹೇಳಲು ಆಗುವುದಿಲ್ಲ ಎಂದರು.

ಮೇಕೆದಾಟು ಪಾದಯಾತ್ರೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ, ಅವರ ಸರ್ಕಾರ ಇದ್ದಾಗ ಯೋಜನೆ ಏಕೆ ಜಾರಿ ಮಾಡಲಿಲ್ಲ. ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಹಿಜಾಬ್, ಹಿಂದು- ಮುಸ್ಲಿಂ ಗಲಾಟೆಗಳು ಆಗಲು ಕಾರಣ ಕಾಂಗ್ರೆಸ್.ಹಿಂದು ಮುಸ್ಲಿಂ ದೂರದೂರವಾಗಬೇಕು ಅಂತ ರಾಜಕೀಯ ಮಾಡುತ್ತಿದ್ದಾರೆ. ಮುಸ್ಲಿಂ ಮತ ಬ್ಯಾಂಕ್ ಗಾಗಿ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಜಾತಿಗಳನ್ನು ಒಡೆದು ಅಧಿಕಾರ ಕಳೆದುಕೊಂಡಿದೆ. ಇದೀಗ ಹಿಂದು ಮುಸ್ಲಿಂ ವಿವಾದ ಹೆಚ್ಚಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.