ಬೆಂಗಳೂರು: ಕೋವಿಡ್ ಪೀಡಿತರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ದೂರವಾಣಿ ಕರೆಮಾಡಿ ಆರೋಗ್ಯವನ್ನು ವಿಚಾರಿಸಿದರು.

ಪ್ರಧಾನಿಯವರು ಬೊಮ್ಮಾಯಿ ಜತೆ ಸುಮಾರು ಐದು ನಿಮಿಷಗಳ ಕಾಲ ಮಾತನಾಡಿದರು. ತಮ್ಮ ಜತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಕೋವಿಡ್ ತಗುಲಿದ ಬಗ್ಗೆ ಪ್ರಧಾನಿಯವರಿಗೆ ಬೊಮ್ಮಾಯಿ ವಿವರಣೆ ನೀಡಿದರು. ಎಲ್ಲರೂ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳುವಂತೆಯೂ ಪ್ರಧಾನಿ ಸಲಹೆ ನೀಡಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಹೇಳಿವೆ.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆಯೂ ಪ್ರಧಾನಿಯವರಿಗೆ ಮಾಹಿತಿ ನೀಡಿದ ಅವರು ರಾಜ್ಯದಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲಾಗಿದೆ. ತಜ್ಞರ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಬೊಮ್ಮಾಯಿ ಹೇಳಿದರು.

ಡಿ.ಕೆ ಮೇಕೆದಾಟು ಪಾದಯಾತ್ರೆ ಕೋವಿಡ್ 3 ನೇ ಅಲೆಯ ‘ಸೂಪರ್ ಸ್ಪ್ರೆಡರ್’:ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.