ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ʼ ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ.ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ. 2/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ. 4/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್ ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ. 6/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
ಅಷ್ಟೇ ಅಲ್ಲ; ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್ʼಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ. 8/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
ಇಲ್ಲಿನ ಡಬಲ್ ಎಂಜಿನ್ @BJP4Karnataka ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು. 10/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 8, 2023
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.