ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ನಡುವೆ ಪಕ್ಷಾಂತರ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ವಾಕ್ಸಮರಕ್ಕೆ ಕಾರಣವಾಗಿದೆ.

ಪಕ್ಷಾಂತರ ವಿಚಾರವನ್ನು ಪ್ರಸ್ತಾಪಿಸಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

‘ಸಿದ್ದರಾಮಯ್ಯನವರೇ, ಈ ಬಾರಿ ನಿಮ್ಮದು ಕ್ಷೇತ್ರಾಂತರವೋ? ಪಕ್ಷಾಂತರವೋ?, ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

‘ಸಿದ್ದರಾಮಯ್ಯನವರೇ, ನಿಮ್ಮ ಆಪ್ತರು ಆಮ್ ಆದ್ಮಿ ಪಾರ್ಟಿ ಹಾಗೂ ಸಮಾಜವಾದಿ ಪಕ್ಷದ ನಾಯಕರ ಭೇಟಿ ಮಾಡಿರುವುದು ಆಕಸ್ಮಿಕ ಘಟನೆಯಾಗಿರಲು ಸಾಧ್ಯವಿಲ್ಲ. ಇದೊಂದು ವ್ಯವಸ್ಥಿತ ನಡೆ. ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಇದರ ಪ್ರತಿಫಲನ ಕಾಣಬಹುದೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಓದಿ... ಬೇರೆ ಪಕ್ಷಕ್ಕೆ ಅರ್ಜಿ ಹಾಕಿಲ್ಲ, ಬಿಜೆಪಿ ತೊರೆಯುವುದಿಲ್ಲ: ಸಚಿವ ಕೆ.ಗೋಪಾಲಯ್ಯ

‘ನಮ್ಮ ಸಂಪರ್ಕದಲ್ಲಿ ಆ ಪಕ್ಷದವರು ಇದ್ದಾರೆ. ಈ ಪಕ್ಷದವರು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಕಳೆದ ಕೆಲ ದಿನಗಳಿಂದ ನಿರಂತರ ಬುರುಡೆ ಬಿಟ್ಟಾಗಲೇ ಅನುಮಾನವಿತ್ತು. ಈಗ ನೋಡಿದರೆ ತಮ್ಮ ಆಪ್ತರನ್ನೇ ಬೇರೆಯವರ ಸಂಪರ್ಕಕ್ಕೆ ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ? ಎಂದು ಬಿಜೆಪಿ ಟೀಕಿಸಿದೆ.

‘ಇಷ್ಟು ದಿನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೇ ಸಿಎಂ ಗಾದಿಗೆ ಕಣ್ಣಿಟ್ಟಿದ್ದರು. ಈಗ ಎಂ.ಬಿ.ಪಾಟೀಲ ಅವರು ಸೇರಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ನಲ್ಲಿ ಕಲಹ ಶಮನವಾಗುವುದಿಲ್ಲ. ಮತ್ತಷ್ಟು ಉಲ್ಬಣಗೊಳ್ಳುವುದರಲ್ಲಿ ಸಂಶಯವಿಲ್ಲ. ಜನರು ಇವರ ಕನಸನ್ನು ನನಸು ಮಾಡಲು ಬಿಡುವುದಿಲ್ಲ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.