ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಸಿಐಡಿ ಅಧಿಕಾರಿಗಳ ಎದುರು ಸೋಮವಾರ ಶರಣಾಗಿದ್ದಾರೆ.

ಸಿಐಡಿ ವಶದಲ್ಲಿರುವ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಒಡೆತನದ ಈ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆ ನಡೆಯುತ್ತಿದೆ.

‘ತಮ್ಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಅವರೇ ಯೋಜನೆ ರೂಪಿಸಿದ್ದರು’ ಎಂದು ವಿಚಾರಣೆ ವೇಳೆ ದಿವ್ಯಾ ಹಾಗರಗಿ ಹೇಳಿಕೆ ನೀಡಿದ ಮರುದಿನವೇ ಕಾಶಿನಾಥ ಶರಣಾಗಿದ್ದಾರೆ.

ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ, ಜಲಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್ ಮಂಜುನಾಥ ಮೇಳಕುಂದಿ ಭಾನುವಾರ ಸಿಐಡಿಗೆ ಶರಣಾಗಿದ್ದರು. ಪ್ರಕರಣ ಬಯಲಿಗೆ ಬರಲು ಕಾರಣರಾಗಿದ್ದ ಶ್ರೀಧರ ಪವಾರ ಅವರನ್ನು ಭಾನುವಾರ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.