ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ.

ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ವಾರ್ಡನ್ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ನಾಡಿನ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ: ದೂರು

’ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ‘ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾತ್ರಿ 10ರ ವೇಳೆಗೆ ಸಮಿತಿಯು ದೂರು ನೀಡುವಂತೆ ಅಧಿಕಾರಿಗೆ ಸೂಚಿಸಿತ್ತು. ಅದರಂತೆ ರಾತ್ರಿ 10.30ರ ವೇಳೆಗೆ ದೂರು ದಾಖಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಒಡನಾಡಿ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.