ಬೆಂಗಳೂರು: ‘ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 1ರಿಂದ 8ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದಲ್ಲಿ 3 ದಿನ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಮೊಟ್ಟೆ ವಿತರಿಸುವ ಕ್ರಮಕ್ಕೆ ಕೆಲವು ಮಠಗಳ ಸ್ವಾಮೀಜಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಸರ್ಕಾರ ಮಣಿಯಬಾರದು’ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ನ (ಎಸ್‌ಎಫ್‌ಐ) ರಾಜ್ಯ ಸಮಿತಿ ಒತ್ತಾಯಿಸಿದೆ.

‘ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿಯ ಹಿನ್ನೆಲೆಯಲ್ಲಿ ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗಾಗಿ ಸರ್ಕಾರ ಕೈಗೊಂಡಿರುವ ಈ ಕ್ರಮ ಸ್ವಾಗತಾರ್ಹವಾದುದು. ಸ್ವಾಮೀಜಿಗಳು ಧರ್ಮ ಹಾಗೂ ನಂಬಿಕೆಯ ನೆಪ ಮುಂದಿಟ್ಟು ಆದೇಶ ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಮೊಟ್ಟೆ ತಿನ್ನುವುದು ಹಾಗೂ ಅದನ್ನು ತಿರಸ್ಕರಿಸುವ ಆಯ್ಕೆ ಮಕ್ಕಳಿಗೆ ಬಿಡಬೇಕು. ಅವರ ಆಹಾರದ ಹಕ್ಕಿನ ಮೇಲೆ ಸ್ವಾಮೀಜಿಗಳು ದಾಳಿ ನಡೆಸುವುದು ಸರಿಯಲ್ಲ. ಅದನ್ನು ನಾವು ಖಂಡಿಸುತ್ತೇವೆ’ ಎಂದುಸಮಿತಿಯ ಅಧ್ಯಕ್ಷ ಅಮರೇಶ ಕಡಗದ ಹೇಳಿದರು.

‘ಶ್ರೀಗಳು ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮುಂದಾಗುವ ಬದಲು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವುದು ಸರಿಯಲ್ಲ. ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಬಳಿಕ ಶಾಲೆಗಳಲ್ಲಿನ ಮಕ್ಕಳ ಹಾಜರಾತಿಯಲ್ಲಿ ಶೇ 12ರಷ್ಟು ಏರಿಕೆಯಾಗಿದೆ. ಶೇ 80ರಷ್ಟು ಮಕ್ಕಳು ಮೊಟ್ಟೆ ವಿತರಣೆಯ ಪರವಾಗಿದ್ದಾರೆ. ಇದನ್ನು ಸ್ವಾಮೀಜಿಗಳು ಅರ್ಥ ಮಾಡಿಕೊಳ್ಳಲಿ’ ಎಂದಿದ್ದಾರೆ.

ರಾಜ್ಯ ಸಮಿತಿ ಉಪಾಧ್ಯಕ್ಷ ದಿಲೀಪ್ ಶೆಟ್ಟಿ, ಪ್ರಜ್ವಲ್, ಭೀಮನಗೌಡ, ಸಂಗಮೇ
ಶ, ಬಸವರಾಜ, ಮಣಿಕಂಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.