ಚಿಕ್ಕಬಳ್ಳಾಪುರ: ಹೈಕೋರ್ಟ್ ಎಸಿಬಿ ರದ್ದುಗೊಳಿಸಿರುವ ವಿಚಾರದ ಕುರಿತು ಆದೇಶವನ್ನು ಇನ್ನು ನಾನು ನೋಡಿಲ್ಲ. ಆ ಆದೇಶವನ್ನು ನೋಡಿದ ನಂತರ ಪೂರ್ಣ ಪ್ರಮಾಣದಲ್ಲಿ ಪ್ರತಿಕ್ರಿಯಿಸುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದರು.

ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆ ಆಗಿತ್ತು. ಕರ್ನಾಟದಲ್ಲಿ ಅಷ್ಟೇ ಅಲ್ಲ ಅನೇಕ ರಾಜ್ಯಗಳಲ್ಲಿ ಎಸಿಬಿ ಇದೆ. ಎಸಿಬಿ ಲೋಕಾಯುಕ್ತದಲ್ಲಿ ಇರಬೇಕು. ಸ್ವತಂತ್ರ ಅಸ್ತಿತ್ವ ಬೇಡ ಎಂದು ಈಗ ಹೈಕೋರ್ಟ್ ತೀರ್ಮಾನಿಸಿದೆ ಎಂದರು.

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕಹೈಕೋರ್ಟ್‌ರದ್ದುಪಡಿಸಿದೆ.

ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ಸರ್ಕಾರ ಎಸಿಬಿ ರಚಿಸಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಂತರ ಇಂದು ನ್ಯಾ. ಬಿ ವೀರಪ್ಪ ಹಾಗೂ ನ್ಯಾ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಈ ಆದೇಶ ಮಾಡಿದೆ.

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಎಸಿಬಿ ಪ್ರಕರಣ: ವರ್ಗಾವಣೆ ಬೆದರಿಕೆ ಬಂದಿದೆ – ನ್ಯಾ.ಸಂದೇಶ್ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.