ಹಿರಿಯೂರು: ಜನರ ಸಮಸ್ಯೆ ಆಲಿಸಲು ತೆರಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಇಂತಹ ಕೃತ್ಯ ಮರುಕಳಿಸಬಾರದು. ಮೊಟ್ಟೆ ಎಸೆದಿರುವುದಕ್ಕೆ ನಾನು ಖುಷಿ ಪಡುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇಲ್ಲಿ ಶಾಂತಿಯಿಂದ ಬದುಕಲು ಅವಕಾಶ ನೀಡಿ. ಕ್ಷುಲ್ಲಕ ವಿಚಾರ ದೂರವಿಟ್ಟು ಸಮಸ್ಯೆಗಳ ಬಗ್ಗೆ ಚರ್ಚಿಸಿ ಎಂದು ಕಾಂಗ್ರೆಸ್ ಮತ್ತು ಬಿಜೆಪಿಗೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.

ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆ ಕುಳಿತರು. ಸುಮಾರು ಅರ್ಧಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.