ವಿಜಯಪುರ: ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ. ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು ಎಂದುರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ರಕ್ಷಣೆ ಹೇಗೆ ಮಾಡಿಕೊಳ್ಳಬಹುದು ಎಂಬುದಕ್ಕೆರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದೆ.

* ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ, ನಿಲ್ಲ ಬೇಡಿ.

*ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೇ ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.

*ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. ಏಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.

*ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ.ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ. ಏಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.

*ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ.

*ವಿದ್ಯುತ್ ಕಂಬ, ಏಲೆಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.

*ತಂತಿಬೇಲಿ, ಬಟ್ಟೆ ಒಣಹಾಕುವ ತಂತಿ, ಇವುಗಳಿಂದ ದೊರವಿರಿ

*ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸ್ ಅನ್ನು ಸ್ವಚ್ಛ ಮಾಡುವ ಸಾಹಸ ಬೇಡ.

*ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.

*ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ನಲ್ಲಿ ಮಾತನಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.

*ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.

*ಕಂಪ್ಯೂಟರ್, ಲ್ಯಾಪ್ಟಾಪ್ಗಳಿಂದ ದೂರ ಇರಿ.

*ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪರ್ಶಿಸದೆ, ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ ಎಂದುರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.