ಅಯೋಧ್ಯೆ ತೀರ್ಪು: ವಿವಾದಿತ ಭೂಮಿಯಲ್ಲಿ ರಾಮ ಮಂದಿರ; ಮಸೀದಿಗೆ ಪರ್ಯಾಯ ಜಮೀನು
LIVE
ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿದ ಬಹುಕಾಲದ ಅನಿಶ್ಚಿತ ಸ್ಥಿತಿ ಕೊನೆಯಾಗಿದೆ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ನಿವೇಶನ ವಿವಾದದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಂವಿಧಾನ ಪೀಠವು ಪ್ರಕರಣದ ವಿಚಾರಣೆಯನ್ನು ಸತತ 40 ದಿನ ನಡೆಸಿ, ಅಕ್ಟೋಬರ್ 16ರಂದು ತೀರ್ಪು ಕಾಯ್ದಿರಿಸಿತ್ತು. ತೀರ್ಪಿನಲ್ಲೇನಿತ್ತು? ಶನಿವಾರದ ಬೆಳವಣಿಗೆಗಳೇನು ಎಂಬ ಮಾಹಿತಿ ಇಲ್ಲಿದೆ.
ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿರುವುದು ಸಂತಸ ತಂದಿದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
09:4909 Nov 2019
ಸುಪ್ರೀಂ ಕೋರ್ಟ್ ತೀರ್ಪು ತೃಪ್ತಿಕರವಾಗಿಲ್ಲ ಎಂದು ಎಐಎಂಐಎಂ ವರಿಷ್ಠ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಅಯೋಧ್ಯೆ ವಿವಾದಿತ ಜಾಗ ಬಿಟ್ಟು ಬೇರೆ ಕಡೆ ನೀಡುವ ಜಮೀನು ನಮಗೆ ಬೇಕಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Asaduddin Owaisi: Not satisfied with the verdict. Supreme Court is indeed supreme but not infallible. We have full faith in the constitution, we were fighting for our right, we don't need 5 acre land as donation. We should reject this 5 acre land offer, don't patronize us. pic.twitter.com/wKXYx6Mo5Q
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
Mohan Bhagwat,RSS Chief: We welcome this decision of Supreme Court. This case was going on for decades and it has reached the right conclusion. This should not be seen as a win or loss.We also welcome everyone's efforts to maintain peace and harmony in society. #Ayodhyajudgementpic.twitter.com/DtNnliaKEA
ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ ಎಂದು ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.