ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವೆಡಿಸೆಂಬರ್ 9ರಂದು ಘರ್ಷಣೆ ನಡೆದಿತ್ತು. ‘ಈ ಘರ್ಷಣೆಯಲ್ಲಿ ಚೀನಾದ ಸೈನಿಕರು ಮೃತಪಟ್ಟಿದ್ದು, ಅವರ ಶವಪೆಟ್ಟಿಗೆಗಳನ್ನು ಸಾಲಾಗಿ ಇರಿಸಲಾಗಿದೆ’ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶವಪೆಟ್ಟಿಗೆಗಳ ಮೇಲೆ ಚೀನಾದ ಧ್ವಜವನ್ನು ಹೊದಿಸಲಾಗಿದೆ. ಸೈನಿಕರಿಗೆ ಚೀನಾ ಸರ್ಕಾರ ಗೌರವ ಸಲ್ಲಿಸಿದೆ ಎಂದು ಹೇಳಲಾಗಿದೆ. ಆದರೆ ಇದು ಸುಳ್ಳು ಮಾಹಿತಿ.

2010ರಲ್ಲಿ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ನಡೆದ ಅಗ್ನಿದುರಂತದಲ್ಲಿ ಮೃತಪಟ್ಟ ಚೀನಾ ಸೈನಿಕರ ಶವಪೆಟ್ಟಿಗೆಗಳನ್ನು ಸಾಲಾಗಿ ಇರಿಸಿದ್ದ ಚಿತ್ರವನ್ನೇ ತವಾಂಗ್ ಘರ್ಷಣೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾದ ಚೀನಾ ಸೈನಿಕರ ಚಿತ್ರ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ. ರಾಯಿಟರ್ಸ್ ಹಾಗೂ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸುದ್ದಿತಾಣಗಳಲ್ಲಿ 12 ವರ್ಷಗಳ ಹಿಂದೆಯೇ ಈ ಚಿತ್ರ ಹಾಗೂ ವರದಿ ಪ್ರಕಟವಾಗಿತ್ತು. ತವಾಂಗ್ನಲ್ಲಿ ಯಥಾಸ್ಥಿತಿಯಿದೆ ಎಂದು ಚೀನಾ ಹೇಳಿಕೊಂಡಿದೆ. ಆದರೆ, ತನ್ನ ಸೈನಿಕರು ಮೃತಪಟ್ಟಿರುವ ಬಗ್ಗೆ ಚೀನಾ ಅಧಿಕೃತ ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.