ನವದೆಹಲಿ: ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಹಿಂದಿನ ಎನ್‌ಡಿಎ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯ ಬದಲಾಗಿ ಈ ಕಾಯ್ದೆ ಜಾರಿಯಾಗಲಿದೆ. ಸೋಮವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.

ಆಧಾರ್ ತಿದ್ದುಪಡಿ ಮಸೂದೆ: ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಿಮ್ ಸಂಪರ್ಕ ಪಡೆಯಲು ಆಧಾರ್ ಕಾರ್ಡನ್ನು ಐಚ್ಛಿಕವಾಗಿ ಬಳಸುವ ತಿದ್ದುಪಡಿ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸಾರ್ವಜನಿಕ ಹಿತಾಸಕ್ತಿಯಿಂದ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಹಾಗೂ ಆಧಾರ್ ದುರ್ಬಳಕೆಯನ್ನು ತಡೆಯಲು ಯುಐಡಿಎಐಗೆ ಈ ಕಾಯ್ದೆ ಸಹಕಾರಿಯಾಗಲಿದೆ. ವ್ಯಕ್ತಿಯು ತನ್ನ ಗುರುತು ಸಾಬೀತುಪಡಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಿಲ್ಲ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ. ಆದರೆ ಆಧಾರ್ ಬಳಕೆ ಮೇಲೆ ಇರುವ ನಿರ್ಬಂಧಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಮಸೂದೆ ಅವಕಾಶ ನೀಡಿದೆ.

ರಾಷ್ಟ್ರಪತಿ ಆಡಳಿತ ವಿಸ್ತರಣೆ:ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿಆಡಳಿತವನ್ನು ಮತ್ತೆ 6 ತಿಂಗಳು ವಿಸ್ತರಿಸಲಾಗಿದೆ. ಸಂಪುಟ ಸಭೆಯು ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದ್ದು, ರಾಷ್ಟ್ರಪತಿ ಸಹಿ ಹಾಕಿದ ಬಳಿ ಜುಲೈ 3ರಿಂದ ಜಾರಿಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.