ನವದೆಹಲಿ: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಸಮೂಹದ ಸಹ ಪ್ರಕಟಣೆಯಾದ ‘ಸುಧಾ’ ವಾರಪತ್ರಿಕೆಯು ಸಂಸತ್‌ನ ಗ್ರಂಥಾಲಯದಲ್ಲಿ ಓದುಗರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಮನವಿ ಮಾಡಿದ್ದಾರೆ.

ವಿವಿಧ ಪ್ರಾದೇಶಿಕ ಭಾಷೆಗಳ ಪತ್ರಿಕೆಗಳು ಮತ್ತು ನಿಯತಕಾಲಿಕಗಳು ಗ್ರಂಥಾಲಯದಲ್ಲಿ ಹೇರಳವಾಗಿ ದೊರೆಯುತ್ತವೆ. ಆದರೆ, ಕನ್ನಡದ ವಾರಪತ್ರಿಕೆಗಳು ಕಾಣುವುದೇ ಕಷ್ಟ. ಓದುಗರಿಗೆ ಕನ್ನಡದ ವಾರಪತ್ರಿಕೆಗಳೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಸಂಸತ್‌ನ ಗ್ರಂಥಾಲಯದ ನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಆಶಯ ಮತ್ತು ಸಂಸತ್‌ನ ಗ್ರಂಥಾಲಯದ ನಿರ್ದೇಶಕರಿಗೆ ಬರೆದ ಪತ್ರದ ಪ್ರತಿಯನ್ನು ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.