ಮಿರ್ಜಾಪುರ: ಟ್ರಕ್ವೊಂದು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನಲ್ಲಿ ಸಂಭವಿಸಿದೆ.

ಮಿರ್ಜಾಪುರ- ವಾರಾಣಸಿ ಗಡಿಯಲ್ಲಿರುವ ಕಚವನ್ ಮತ್ತು ಮಿರ್ಜಾಮುರಾದ್ ನಡುವಿನ ಜಿ.ಟಿ ರಸ್ತೆಯಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮಿರ್ಜಾಪುರ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.

ಭದೋಹಿ ಜಿಲ್ಲೆಗೆ ಕಟ್ಟಡ ನಿರ್ಮಾಣಕ್ಕಾಗಿ ತೆರಳಿದ್ದ 13 ಜನರನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಕರೆತರಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಟ್ರ್ಯಾಕ್ಟರ್ಗೆ ಗುದ್ದಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಎಸ್ಪಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯ ನಡೆಸಿದ್ದಾರೆ. ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದು, ಮೂವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.