ನವದೆಹಲಿ: ನೂರು ವರ್ಷಗಳ ಹಿಂದೆ ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರಿಗೆ ಶಾಲೆಯಲ್ಲಿ ಕುಡಿಯಲು ನೀರು ನಿರಾಕರಿಸಲಾಗಿತ್ತು. ಇಂದು ಅದೇ ಕಾರಣಕ್ಕೆ ದಲಿತ ಬಾಲಕನ ಹತ್ಯೆಯಾಗಿದೆ ಎಂದು ಲೋಕಸಭೆ ಮಾಜಿ ಸ್ಪೀಕರ್ ಮೀರಾ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದ ಜಾಲೋರ್ ಜಿಲ್ಲೆಯ ಸುರಾನಾ ಎಂಬ ಹಳ್ಳಿಯೊಂದರ ಖಾಸಗಿ ಶಾಲೆಯಲ್ಲಿ ಇಂದ್ರ ಮೇಘವಾಲ್ ಎಂಬ ವಿದ್ಯಾರ್ಥಿಯು ಕುಡಿಯುವ ನೀರಿನ ಮಡಕೆ ಮುಟ್ಟಿದನೆಂಬ ಕಾರಣಕ್ಕೆ ಶಿಕ್ಷಕ ಚಾಯಿಲ್ ಸಿಂಗ್ ತೀವ್ರವಾಗಿ ತಳಿಸಿದ್ದರು. ಜುಲೈ 20ರಂದು ಈ ಘಟನೆ ನಡೆದಿತ್ತು. ತೀವ್ರವಾಗಿ ಗಾಯಗೊಂಡು, ಸಾವು ಬದುಕಿನ ಹೋರಾಟ ನಡೆಸಿದ್ದ ವಿದ್ಯಾರ್ಥಿ ಕಳೆದ ಶನಿವಾರ ಮೃತಪಟ್ಟಿದ್ದ. ಈ ವಿಷಯ ರಾಷ್ಟ್ರಮಟ್ಟದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಇದೇ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿರುವ ಮೀರಾ ಕುಮಾರ್, ‘100 ವರ್ಷಗಳ ಹಿಂದೆ ಶಾಲೆಯಲ್ಲಿ ಸವರ್ಣೀಯ ಹಿಂದೂಗಳಿಗೆ ಮೀಸಲಿಟ್ಟಿದ್ದ ಮಡಿಕೆಯಲ್ಲಿ ನೀರು ಕುಡಿಯಲು ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರನ್ನು ನಿರ್ಬಂಧಿಸಲಾಗಿತ್ತು. ಅಂದು ಅವರ ಪ್ರಾಣ ಉಳಿದಿದ್ದು ಒಂದು ಪವಾಡ’ ಎಂದು ಅವರು ಹೇಳಿದ್ದಾರೆ.

‘ಇಂದು ಅದೇ ಕಾರಣಕ್ಕೆ ಒಂಬತ್ತು ವರ್ಷದ ದಲಿತ ಬಾಲಕನನ್ನು ಹತ್ಯೆ ಮಾಡಲಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತಿ ವ್ಯವಸ್ಥೆ ನಮ್ಮ ದೊಡ್ಡ ಶತ್ರುವಾಗಿಯೇ ಉಳಿದುಕೊಂಡಿದೆ’ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

2009–14ರ ವರೆಗೂ ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಮೀರಾ ಕುಮಾರ್ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. ಐದು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರ ಸಚಿವರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.

2017ರಲ್ಲಿ ನಡೆದಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಅವರು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು.

ಇವುಗಳನ್ನೂ ಓದಿ

ನೀರಿನ ಮಡಕೆ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ದಲಿತ ಬಾಲಕ ಸಾವು

ಶಿಕ್ಷಕನ ಹೊಡತಕ್ಕೆ ಮೃತಪಟ್ಟ ದಲಿತ ವಿದ್ಯಾರ್ಥಿ: ಕಾಂಗ್ರೆಸ್ ಶಾಸಕ ರಾಜೀನಾಮೆ

ಉತ್ತರ ಪ್ರದೇಶ: ಶಿಕ್ಷಕರ ಹೂಜಿಯಿಂದ ನೀರು ಕುಡಿದ ದಲಿತ ವಿದ್ಯಾರ್ಥಿನಿ ಮೇಲೆ ಹಲ್ಲೆ

ಮೇಲ್ಜಾತಿಯವರು ತಯಾರಿಸಿದ ಬಿಸಿಯೂಟ ತಿನ್ನದೆ ದಲಿತ ವಿದ್ಯಾರ್ಥಿಗಳಿಂದ ಪ್ರತಿರೋಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.