ಬಿಜಾಪುರ (ಪಿಟಿಐ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ತಿಳಿಸಿದರು.

ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ. 12 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳನ್ನು ಮುಖ್ಯಮಂತ್ರಿ ಅಭಿನಂದಿಸಿದರು. ತಿಂಗಳಲ್ಲಿ ಛತ್ತೀಸಗಢದಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳಿಗೆ ದೊರೆತಿರುವ ಮೂರನೇ ದೊಡ್ಡ ಯಶಸ್ಸು ಇದಾಗಿದೆ.

ಏಪ್ರಿಲ್ 16ರಂದು ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 29 ನಕ್ಸಲರು ಹಾಗೂ ಏಪ್ರಿಲ್ 30ರಂದು ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 10 ನಕ್ಸಲರನ್ನು ಕೊಲ್ಲಲಾಗಿತ್ತು.

ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ಈ ವರ್ಷ ನಡೆದಿರುವ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಲ್ಲಿಯವರೆಗೆ ಒಟ್ಟು 103 ನಕ್ಸಲರು ಹತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.