ತಿರುವನಂತಪುರ: ವಯನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯ ಮುಂದುವರಿದಿದೆ. ಈ ನಡುವೆ ಘಟನೆಯಲ್ಲಿ ಬದುಕುಳಿದವರ ಮಾನಸಿಕ ಆಘಾತವನ್ನು ನಿವಾರಿಸಲು ರಾಜ್ಯ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ 'ಮಾನಸಿಕ ಆರೋಗ್ಯ ವಿಪತ್ತು ನಿರ್ವಹಣಾ ತಂಡ (MHDMT)'ವನ್ನು ರಚಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಮನೋವೈದ್ಯರು, ಕ್ಲಿನಿಕಲ್ ಮನಃಶಾಸ್ತ್ರಜ್ಞರು, ಸಮಾಜ ಸೇವೆಯಲ್ಲಿರುವ ಮನೋವೈದ್ಯರು ಮತ್ತು ಆಪ್ತ ಸಹಾಯಕರನ್ನು ಒಳಗೊಂಡ 121 ಸದಸ್ಯರ ತಂಡವನ್ನು ಜುಲೈ 30ರಂದು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಂಡವು ಎಲ್ಲಾ ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. ಮಾನಸಿಕ ಆರೋಗ್ಯ ಕಾರ್ಯಕರ್ತರು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸಾಂತ್ವನ ಹೇಳುತ್ತಾರೆ. ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.Wayanad Landslides | 300ರ ಗಡಿ ದಾಟಿದ ಮೃತರ ಸಂಖ್ಯೆ; ಮುಂದುವರಿದ ಕಾರ್ಯಾಚರಣೆ.
ವಿಪತ್ತಿನಿಂದ ಉಂಟಾಗುವ ಮಾನಸಿಕ ಆಘಾತದ ಲಕ್ಷಣಗಳು ವಾರಗಳ ನಂತರ ಕಾಣಿಸಿಕೊಳ್ಳಬಹುದು ಮತ್ತು ಆತಂಕ ಮತ್ತು ಖಿನ್ನತೆಯಂತಹ ಸಮಸ್ಯೆಗಳು ದೀರ್ಘಕಾಲದವರೆಗೆ ಇರಬಹುದು. ಹಾಗಾಗಿ ಆರೋಗ್ಯ ಇಲಾಖೆಯು ವಯನಾಡು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಮಗ್ರ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ. ಈ ತಂಡವು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತಂಡದ ಆರೋಗ್ಯ ಕಾರ್ಯಕರ್ತರು, ಪೊಲೀಸ್ ಸೇರಿದಂತೆ ರಕ್ಷಣಾ ಕಾರ್ಯಕರ್ತರು, ಕಂದಾಯ ಅಧಿಕಾರಿಗಳು, ಸ್ಥಳೀಯ ಇಲಾಖೆ ಅಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸುತ್ತಾರೆ. ಮಾನಸಿಕ ಸಮಸ್ಯೆಗಳ ಕುರಿತು ದಿನದ 24 ಗಂಟೆಗಳ ಕಾಲ ಟೋಲ್ ಫ್ರೀ ಸಂಖ್ಯೆ '14416'ಕ್ಕೆ ಕರೆ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
.Wayanad Landslides | ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ.
ಮೂರು ದಿನಗಳ ಹಿಂದೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 264 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 264 ಗಾಯಾಳುಗಳ ಪೈಕಿ 176 ಜನರನ್ನು ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ, ಇಬ್ಬರನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 86 ಜನ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಭೂಕುಸಿತದಿಂದ ಸ್ಥಳಾಂತರಗೊಂಡ 9,328 ಜನರನ್ನು ವಯನಾಡಿನ 91 ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
.Wayanad Landslide | ದುರಂತಕ್ಕೆ ನಾಡಜನರ ಮಿಡಿತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.