ಮಥುರಾ: ಇಲ್ಲಿನ ಗೋವಿಂದನಗರದ ಆರ್‌ಎಸ್‌ಎಸ್ ಕಚೇರಿ ಮೇಲೆ ಇಟ್ಟಿಗೆಗಳಿಂದ ದಾಳಿ ಮಾಡಿದ ಆರೋಪದಡಿ 13 ಜನರನ್ನ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಕರ್ತವ್ಯ ಲೋಪ ಆರೋಪದಡಿ ಹೆಡ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಎಸ್‌ಎಸ್‌ಪಿ ಗೌರವ್ ಗ್ರೋವರ್ ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆ ತನಿಖೆ ಸಹ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಘಟನೆಯಲ್ಲಿ ಪವನ್ ಮತ್ತು ಸೋನು ಎಂಬ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ ಪ್ರಕಾರ, ಸೋಮವಾರ ಆರ್‌ಎಸ್ಎಸ್ ಸ್ವಯಂ ಸೇವಕರೊಬ್ಬರು ಕಬ್ಬಿಣದ ಸರಳು ಕದಿಯುತ್ತಿದ್ದ ಅಪ್ರಾಪ್ತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಪ್ರತಿಯಾಗಿ, ಅಪ್ರಾಪ್ತನ ಸಂಬಂಧಿ ಆರ್‌ಎಸ್ಎಸ್ ಕಚೇರಿ ಮೇಲೆ ಇಟ್ಟಿಗೆಗಳಿಂದ ದಾಳಿ ಮಾಡುವ ದುಸ್ಸಾಹಸಕ್ಕೆ ಕೈಹಾಕಿದ್ದ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.