ತಿರುವನಂತಪುರ: ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿ ಶಾರುಖ್ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಆರೋಪಿ ಸೈಫಿ(24) ಗಾಯಗೊಂಡಿರುವುದರ ಜತೆಗೆ ಆತನ ಬಿಲಿರುಬಿನ್ ಮಟ್ಟಗಳು ಹೆಚ್ಚಾಗಿದ್ದರಿಂದ ಗುರುವಾರ ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದರು.

ನಂತರ, ವೈದ್ಯಕೀಯ ಮಂಡಳಿಯು ಸಭೆ ಸೇರಿ ಆರೋಪಿಯ ಆರೋಗ್ಯ ಸ್ಥಿತಿಯನ್ನು ನಿರ್ಣಯಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ನಿರ್ಧರಿಸಿತು. ಆತನನ್ನು ಯಾವ ಜೈಲಿಗೆ ಕೊಂಡೊಯ್ಯಬೇಕು ಎಂಬುದನ್ನು ಪೊಲೀಸರು ಇನ್ನಷ್ಟೇ ನಿರ್ಧರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.