ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲಾ ಅವರಣದೊಳಗಿನ ಮರಕ್ಕೆ ಬಡಿದ ಸಿಡಿಲು: 15 ವಿದ್ಯಾರ್ಥಿಗಳು ಅಸ್ವಸ್ಥ

Published 12 ಜುಲೈ 2024, 2:30 IST
Last Updated 12 ಜುಲೈ 2024, 2:30 IST
ಅಕ್ಷರ ಗಾತ್ರ

ಬಹರಾಂಪುರ: ಶಾಲಾ ಆವರಣದೊಳಗಿದ್ದ ಮರವೊಂದಕ್ಕೆ ಸಿಡಿಲು ಬಡಿದು ಕಾರಣ ಕನಿಷ್ಠ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಶ್ಚಿಮ ಬಂಗಾಳದ ಮರ್ಷಿದಾಬಾದ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೊಮ್ಕಲ್‌ನಲ್ಲಿರುವ ಭಗೀರತಪುರ ಹೈಸ್ಕೂಲ್‌ನ ಕಟ್ಟಡದ ಸಮೀಪವೇ ಇರುವ ಮರಕ್ಕೆ ಸಿಡಿಲು ಬಡಿದಿದೆ. ಮಿಂಚು ಹಾಗೂ ಸಿಡಿಲಿನ ಶಬ್ದದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಲಾ ಸಿಬ್ಬಂದಿಗಳು, ಪೋಷಕರು ಹಾಗೂ ಸ್ಥಳೀಯ ನಿವಾಸಿಗಳು ತಕ್ಷಣವೇ ವಿದ್ಯಾರ್ಥಿಗಳನ್ನು ಡೊಮ್ಕಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಆದರೆ ಅವರು ಆಘಾತಕ್ಕೊಳಗಾಗಿದ್ದಾರೆ. ಅವರ ಮೇಲೆ ನಿಗಾ ಇರಿಸಲಾಗಿದ್ದು, ಪರೀಕ್ಷೆ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT