ಮಂಡಿ: ಬಾರೋಟ್-ಘಟದಾನಿ ರಸ್ತೆಯಲ್ಲಿ ಕಾರೊಂದು ಕಮರಿಗೆ ಬಿದ್ದ ಪರಿಣಾಮ 15 ವರ್ಷದ ಬಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತರನ್ನು ಮಂಡಿ ಜಿಲ್ಲೆಯ ಪಾಧರ್ ತಹಸಿಲ್ ನಿವಾಸಿಗಳಾದ ಗಂಗಾ ಸಿಂಗ್ (27), ಸಾಗರ್ (15), ಕರಮ್ ಸಿಂಗ್ (33), ಗುಲಾಬ್ ಸಿಂಗ್ (33) ಮತ್ತು ರಾಜೇಶ್ ಕುಮಾರ್ (23) ಎಂದು ಗುರುತಿಸಲಾಗಿದೆ.

ಶನಿವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಮರಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 106 ಮತ್ತು 281 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಸಾಕ್ಷಿ ವರ್ಮಾ ತಿಳಿಸಿದ್ದಾರೆ.

ಘಟನೆ ಕುರಿತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ, ಮೃತರ ಕುಟುಂಬಗಳಿಗೆ ತಲಾ ₹25 ಸಾವಿರ ತಕ್ಷಣದ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.