ನಾಗಪುರ:ಭಾರತ ಸರ್ಕಾರಕ್ಕೆ ಸೇರಿದ 15 ವರ್ಷ ಹಳೆಯ ಎಲ್ಲ ವಾಹನಗಳನ್ನು ಗುಜರಿಗೆ ಹಾಕಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರಗಳಿಗೆಮಾಹಿತಿ ನೀಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿ ನಡೆದ'ಕೃಷಿ–ದೂರದೃಷ್ಟಿ' ವಾರ್ಷಿಕ ವಸ್ತು ಪ್ರದರ್ಶನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಗಡ್ಕರಿ ಮಾತನಾಡಿದ್ದಾರೆ.

'15 ವರ್ಷ ಪೂರೈಸಿದ ಹಾಗೂ ಭಾರತ ಸರ್ಕಾರಕ್ಕೆ ಸೇರಿದ ಎಲ್ಲ ವಾಹನಗಳನ್ನು ಗುಜರಿಗೆ ಹಾಕುವುದಕ್ಕೆ ಸಂಬಂಧಿಸಿದ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಿನ್ನೆ (ಗುರುವಾರ) ಸಹಿ ಮಾಡಿದೆ. ಈ ನೀತಿಯನ್ನು ಎಲ್ಲ ರಾಜ್ಯಗಳಿಗೂ ರವಾನಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಇದನ್ನು ಅಳವಡಿಸಿಕೊಳ್ಳಬೇಕಿದೆ' ಎಂದು ಹೇಳಿದ್ದಾರೆ.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಇಂಡಿಯನ್ ಆಯಿಲ್ನ ಎರಡು ಘಟಕಗಳು ಪಾಣಿಪತ್ನಲ್ಲಿ ಅತಿಶೀಘ್ರದಲ್ಲೇ ಆರಂಭವಾಗಲಿವೆ. ಒಂದರಲ್ಲಿ ನಿತ್ಯ 1 ಲಕ್ಷ ಲೀಟರ್ನಷ್ಟು ಎಥೆನಾಲ್ ಅನ್ನು ಉತ್ಪಾದನೆಯಾಗಲಿದೆ. ಮತ್ತೊಂದರಲ್ಲಿ ಭತ್ತದ ತ್ಯಾಜ್ಯದಿಂದ ತಯಾರಿಸುವ ಬಯೋ–ಬಿಟುಮೆನ್ ಅನ್ನುಪ್ರತಿದಿನ 150 ಟನ್ನಷ್ಟು ಉತ್ಪಾದಿಸಲಾಗುವುದು. ಇದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ಭತ್ತ ಬೆಳೆಯುವ ದೇಶದ ವಿವಿಧ ಭಾಗಗಳಲ್ಲಿ ತ್ಯಾಜ್ಯಕ್ಕೆ ಬೆಂಕಿ ಹಾಕುವುದರಿಂದ ಉಂಟಾಗುತ್ತಿರುವ ವಾಯು ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ಇನ್ನು ಮುಂದೆ ಭತ್ತದ ತ್ಯಾಜ್ಯವನ್ನು ಎಥೆನಾಲ್ ಹಾಗೂ ಬಯೋ ಬಿಟುಮೆನ್ ಉತ್ಪಾದನೆಗೆ ಬಳಸಲಾಗುತ್ತದೆ ಎಂದಿದ್ದಾರೆ.

'ದೇಶದಲ್ಲಿ 80 ಲಕ್ಷ ಟನ್ನಷ್ಟುಬಯೋ–ಬಿಟುಮೆನ್ ಅಗತ್ಯವಿದೆ. ಸದ್ಯ 50 ಲಕ್ಷ ಟನ್ ಅನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ಉಳಿದ 25 ಲಕ್ಷ ಟನ್ ಆಮದು ಮಾಡಿಕೊಳ್ಳಲಾಗುತ್ತಿದೆ' ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.