ಇಂಫಾಲ್: ಮಣಿಪುರದಲ್ಲಿ ಮೇ ತಿಂಗಳಿನಲ್ಲಿ ಪ್ರಾರಂಭವಾದ ಜನಾಂಗೀಯ ಕಲಹದಲ್ಲಿ ಇದುವರೆಗೆ ಒಟ್ಟು 175 ಜನರು ಮೃತಪಟ್ಟಿದ್ದು, 1,108 ಜನರು ಗಾಯಗೊಂಡಿದ್ದಾರೆ ಮತ್ತು 32 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಒಟ್ಟು 4,786 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಹಾಗೂ 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇನ್‌ಸ್ಪೆಕ್ಟರ್-ಜನರಲ್ ಆಫ್ ಪೊಲೀಸ್ (ಐಜಿಪಿ) ಐ.ಕೆ ಮುವಾ, ‘ಮಣಿಪುರವನ್ನು ಸಹಜ ಸ್ಥಿತಿಗೆ ತರಲು ಪೊಲೀಸರು, ಕೇಂದ್ರ ಪಡೆಗಳು ಮತ್ತು ನಾಗರಿಕರ ಆಡಳಿತವು ಹಗಲಿರುಳು ಪ್ರಯತ್ತಿಸುತ್ತಿದೆ. ಈ ಮೂಲಕ ಮಣಿಪುರವನ್ನು ಮೊದಲಿನ ಸ್ಥಿತಿಗೆ ತರುವ ಭರವಸೆಯನ್ನು ಸಾರ್ವಜನಿಕರಿಗೆ ನಾವು ನೀಡಬಹುದು. ಕಾಣೆಯಾಗಿದ್ದ ಶಸ್ತ್ರಾಸ್ತ್ರಗಳಲ್ಲಿ 1,359 ಬಂದೂಕುಗಳು ಮತ್ತು 15,050 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸರ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 5,172 ಬೆಂಕಿ ಹಚ್ಚಿದ ಪ್ರಕರಣ ವರದಿಯಾಗಿವೆ, 254 ಚರ್ಚ್‌ಗಳು ಹಾಗೂ 132 ದೇವಾಲಯಗಳು ಸೇರಿದಂತೆ 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಮುವಾ ಹೇಳಿದ್ದಾರೆ.

ವಿಷ್ಣುಪುರ ಜಿಲ್ಲೆಯ ಫೌಗಕ್‌ಚಾವೊ ಇಖೈಯಿಂದ ಚುರಾಚಂದ್‌ಪುರ ಜಿಲ್ಲೆಯ ಕಾಂಗ್ವೈವರೆಗಿನ ಭದ್ರತಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭದ್ರತೆ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಐಜಿಪಿ (ಆಡಳಿತ) ಕೆ. ಜಯಂತ ಅವರು ಮಾತನಾಡಿ, ಮೃತಪಟ್ಟ 175 ಜನರ ಪೈಕಿ ಒಂಬತ್ತು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ–32 ಮತ್ತು ರಾಷ್ಟ್ರೀಯ ಹೆದ್ದಾರಿ–2 ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ‘ನಾವು ಪಡೆಗಳನ್ನು ನಿಯೋಜಿಸಿದ್ದೇವೆ. ನಾವು ರಾಷ್ಟ್ರೀಯ ಹೆದ್ದಾರಿ 32ನಲ್ಲಿ 15ಕ್ಕೂ ಹೆಚ್ಚು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ಹೊಂದಿದ್ದೇವೆ ಎಂದು ಐಜಿಪಿ (ವಲಯ 3) ನಿಶಿತ್ ಉಜ್ವಲ್ ಹೇಳಿದ್ದಾರೆ.

ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟು ಮೈತೇಯಿಗಳಿದ್ದು, ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇ 40 ರಷ್ಟಿದ್ದು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.