ನವದೆಹಲಿ: 1984ರ ಸಿಖ್ ವಿರೋಧಿ ಹಿಂಸಾಚಾರದ ವೇಳೆ ಪುಲ್ ಬಂಗಷ್ನಲ್ಲಿ ನಡೆದ ಕೊಲೆ ಪ್ರಕರಣಗಳ ಸಂಬಂಧ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಶೇಷ ನ್ಯಾಯಾದೀಶ ವಿಕಾಸ್ ಧುಳ್ ಅವರು ಟೈಟ್ಲರ್ಗೆ ಜಾಮೀನು ನೀಡುವ ಮುನ್ನ, ಸಾಕ್ಷ್ಯ ನಾಶದ ಪ್ರಯತ್ನ ನಡೆಸುವಂತಿಲ್ಲ ಹಾಗೂ ಅನುಮತಿ ಇಲ್ಲದೆ ದೇಶ ತೊರೆಯಬಾರದು ಎಂಬ ಷರತ್ತುಗಳನ್ನು ವಿಧಿಸಿದ್ದಾರೆ.

ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಸಿಖ್ ಸಮುದಾಯದವರಾದ ಅವರ ಅಂಗರಕ್ಷಕರೇ 1984ರ ಅಕ್ಟೋಬರ್ 31ರಂದು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಸಿಖ್ ವಿರೋಧಿ ಹಿಂಸಾಚಾರ ಭುಗಿಲೆದ್ದಿತ್ತು. ಮರುದಿನ (ನ. 1) ಪುಲ್ ಬಂಗಷ್ನಲ್ಲಿ ಗುರುದ್ವಾರವನ್ನು ದ್ವಂಸಗೊಳಿಸಿ ಮೂವರನ್ನು ಹತ್ಯೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.