ಟೊರಾಂಟೊ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಲಘು ವಿಮಾನ ಪತನಗೊಂಡು ಇಬ್ಬರು ಭಾರತೀಯ ತರಬೇತಿ ನಿರತ ಪೈಲಟ್‌ಗಳು ಸೇರಿ ಮೂವರು ಮೃತಪಟ್ಟಿದ್ದಾರೆ.

ಚಿಲ್ಲಿವಾಕ್ ನಗರದ ವಿಮಾನ ನಿಲ್ದಾಣದ ಬಳಿ ಸ್ಕೈಕ್ವೆಸ್ಟ್ ವಿಮಾನಯಾನ ಸಂಸ್ಥೆಗೆ ಸೇರಿದ ಎರಡು ಎಂಜಿನ್‌ಗಳ ಲಘುವಿಮಾನ ಪತನಗೊಂಡು ಮುಂಬೈನ ಅಭಯ್ ಗದ್ರು (25) ಮತ್ತು ಯಶ್ ರಾಮುಗಡೆ (25) ಎನ್ನುವವರು ಮೃತಪಟ್ಟಿದ್ದಾರೆ. ವಿಮಾನದ ಪೈಲಟ್‌ನ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭಯ್ ಅವರು ಪೈಲಟ್ ತರಬೇತಿ ಪೂರ್ಣಗೊಳಿಸುವ ಸಲುವಾಗಿ ಮೂರು ವರ್ಷಗಳ ಹಿಂದೆ ಕೆನಡಾಕ್ಕೆ ತೆರಳಿದ್ದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಯಶ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ.

ವಿಮಾನ ಪತನಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.