ಚಂಡೀಗಢ/ನವದೆಹಲಿ: ಐಎನ್ಎಲ್ಡಿ ಹರಿಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠೀ ಹತ್ಯೆಗೆ ಸಂಬಂಧಿಸಿದಂತೆ ಗೋವಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಝಜ್ಜರ್ ಜಿಲ್ಲೆಯ ಬಹದ್ದೂರ್ಗಡದಲ್ಲಿ ಫೆ.25ರಂದು ಆರೋಪಿಗಳು ರಾಠೀ ಮತ್ತು ಐಎನ್ಎಲ್ಡಿ ಕಾರ್ಯಕರ್ತ ಜೈಕಿಶನ್ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಿದ್ದರು.

ಹರಿಯಾಣ ಪೊಲೀಸ್ನ ವಿಶೇಷ ಟಾಸ್ಕ್ ಫೋರ್ಸ್, ಜಿಲ್ಲಾ ಪೊಲೀಸರು ಹಾಗೂ ದೆಹಲಿ ಪೊಲೀಸ್ನ ವಿಶೇಷ ಘಟಕದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಗೋವಾದ ಹೋಟೆಲ್ನಲ್ಲಿ ತಂಗಿದ್ದ ಆರೋಪಿಗಳಾದ ಆಶೀಶ್ ಮತ್ತು ಸೌರಭ್ನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಠೀ ವಾಹನದ ಮೇಲೆ ಆಶೀಶ್, ಸೌರಭ್, ನಕುಲ್, ಅತುಲ್ ಗುಂಡಿನ ಮಳೆಗರೆದಿದ್ದರು ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.