ನಾಸಿಕ್: ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್, ಎಐಎಂಐಎಂ ನಾಯಕ ಅಬ್ದುಲ್ ಮಲಿಕ್ ಯೂನುಸ್ ಶೇಕ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮ್ಹಾಲ್ಡೆ ಶಿವಾರ್‌ನಲ್ಲಿ ನಡೆದ ಭೂ ವ್ಯವಹಾರಗಳಿಗೆ ಸಂಬಂಧಿಸಿದ ವ್ಯಾಜ್ಯದಿಂದಾಗಿ ಶೇಕ್ ಅವರ ಮೇಲೆ ದಾಳಿ ನಡೆಸಿರುವುದಾಗಿ ಬಂಧಿತ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಕೇತ್ ಭಾರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸೋಮವಾರ ಮುಂಜಾನೆ ಮಾಲೆಗಾಂವ್‌ನ ಹಳೆಯ ಆಗ್ರಾ ರಸ್ತೆಯಲ್ಲಿರುವ ಕಟ್ಟಡ ಸಾಮಗ್ರಿಗಳ ಅಂಗಡಿಯೊಂದರ ಮುಂದೆ ಶೇಕ್ ಅವರು ನಿಂತಿದ್ದ ವೇಳೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು 3 ಸುತ್ತು ಗುಂಡಿನ ದಾಳಿ ನಡೆಸಿದ್ದರು.

ಘಟನೆಯಲ್ಲಿ ಶೇಕ್ ಅವರ ಎದೆ ಮತ್ತು ಕಾಲಿನ ಭಾಗಕ್ಕೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.

ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆಯು ಸೆರೆಯಾಗಿದೆ. ಅದರ ಆಧಾರದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದಡಿ ಫಾರೂಕ್ ಪಟೇಲ್ ಮತ್ತು ಆಪ್ತನನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

ಬಂಧಿತರಿಂದ ಒಂದು ಪಿಸ್ತೂಲ್, ದಾಳಿಗೆ ಬಳಸಿದ ದ್ವಿಚಕ್ರ ವಾಹನ ಹಾಗೂ ಎರಡು ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.