ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಕಾಲದ ಆಡಳಿತದಲ್ಲಿ ಒಟ್ಟು 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಅಸಮರ್ಥ ಮತ್ತು ವ್ಯರ್ಥ ಸರ್ಕಾರವಾಗಿದೆ ಎಂದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಜನಾಂವ್, ಸೂರ್ಯಪೇಟ್ ಮತ್ತು ನಲ್ಗೊಂಡ ಪ್ರದೇಶಗಳಿಗೆ ಭೇಟಿ ನೀಡಿ ಬರಗಾಲ ಪರಿಸ್ಥಿತಿ ಇರುವ ಕೃಷಿ ಭೂಮಿಯನ್ನು ಪರಿಶೀಲಿಸಿದ ಅವರು ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ‘ನೀರು ಮತ್ತು ವಿದ್ಯುತ್ ಸೌಲಭ್ಯಗಳ ಕೊರತೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. 15 ಲಕ್ಷ ಎಕರೆ ಬೆಳೆಗಳು ಒಣಗಿಹೋಗಿವೆ. ಪ್ರಚಲಿತ ಸಮಸ್ಯೆಗಳನ್ನು ಪರಿಹರಿಸುವ ಬದಲು ಕಾಂಗ್ರೆಸ್ ಜನರ ಗಮನವನ್ನು ಇದರಿಂದ ಬೇರೆಡೆಗೆ ಹರಿಸಲು ಯೋಜಿಸುತ್ತಿದೆ’ ಎಂದು ಕಿಡಿಕಾರಿದರು.

‘ನಮಗೆ ಬಂದಿರುವ ಮಾಹಿತಿ ಪ್ರಕಾರ 100 ದಿನಗಳಲ್ಲಿ 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವರು ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಇಂತಹ ಪರಿಸ್ಥಿತಿ ಬರುತ್ತದೆ ಎಂದು ನಾವು ಯೋಚಿಸಿರಲಿಲ್ಲ. ರಾಜ್ಯದ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಲು ಸರ್ಕಾರ, ಸಚಿವರು ವಿಫಲರಾಗಿದ್ದಾರೆ’ ಎಂದರು.

‘ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಬಿಆರ್‌ಎಸ್ ನಿಮ್ಮ ಪರವಾಗಿ ಹೋರಾಡುತ್ತದೆ. ಪ್ರಮುಖ ವಿಪಕ್ಷವಾಗಿ ಇದು ನಮ್ಮ ಜವಾಬ್ದಾರಿಯಾಗಿದೆ’ ಎಂದು ರೈತರಿಗೆ ಸಂದೇಶ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.