ನವದೆಹಲಿ: ವೀರ ವನಿತೆ ಕಿತ್ತೂರು ಚನ್ನಮ್ಮ ಜನ್ಮದಿನಾಚರಣೆ ಹಾಗೂ ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷಗಳು ಸಂದ ಸಂದರ್ಭದಲ್ಲಿ ಸಂಸತ್ ಆವರಣದಲ್ಲಿ ಚನ್ನಮ್ಮ ಅವರ ಸಾಧನೆಯನ್ನು ಸ್ಮರಿಸಲಾಯಿತು.

ಚನ್ನಮ್ಮ ಪ್ರತಿಮೆಗೆ ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ ಮತ್ತಿತರರು ಪುಷ್ಪನಮನ ಸಲ್ಲಿಸಿದರು.

ವಿ.ಸೋಮಣ್ಣ ಮಾತನಾಡಿ, ‘ಬ್ರಿಟಿಷರ ವಿರುದ್ಧ ಬಂಡಾಯ ಸಾರಿದ ಮೊದಲ ಧೀರ ಮಹಿಳೆ ಚನ್ನಮ್ಮ. ಬ್ರಿಟಿಷರ ವಿರುದ್ಧ ಹೋರಾಟದ ಮೂಲಕ ಸಂಚಲನ ಮೂಡಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆ ನೀಡಿದರು’ ಎಂದರು.

ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸಂಸತ್ ಆವರಣದಲ್ಲಿ ಪ್ರತಿವರ್ಷವೂ ಕಾರ್ಯಕ್ರಮ ನಡೆಸಬೇಕು. ಈ ಮೂಲಕ ಉತ್ತರ ಭಾರತದ ಜನರಿಗೆ ಚನ್ನಮ್ಮನ ಶೌರ್ಯ ಸಾಹಸ ತಿಳಿಯುವಂತೆ ಆಗಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.