ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಮಥುರಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸುವಂತೆ ಬಿಜೆಪಿ ಸಂಸದರೊಬ್ಬರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಜೊತೆಗೆ, ಈ ಪತ್ರವನ್ನು ಶ್ರೀಕೃಷ್ಣನಿಂದ ಪ್ರೇರಣೆ ಪಡೆದು ಬರೆಯುತ್ತಿರುವುದಾಗಿ ಅವರು ಹೇಳಿದ್ದಾರೆ.

‘ಆದಿತ್ಯನಾಥರನ್ನು ಮಥುರಾ ಕ್ಷೇತ್ರದ ಸ್ಪರ್ಧಿ ಎಂದು ಘೋಷಿಸುವಂತೆ ಮನವಿ ಮಾಡಿ ಪತ್ರ ಬರೆಯಲು ಶ್ರೀ ಕೃಷ್ಣ ನನಗೆ ಪ್ರೇರಣೆ ನೀಡಿದ್ದಾನೆ’ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಹರ್ನಾಥ್ ಸಿಂಗ್ ಯಾದವ್ ಪತ್ರದಲ್ಲಿ ಹೇಳಿದ್ದಾರೆ.

ಆದಿತ್ಯನಾಥ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಪಕ್ಷ ಬಯಸಿದರೆ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಆದಿತ್ಯನಾಥ ಹೇಳಿದ್ದಾರೆ.

ಆದರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಬಿಜೆಪಿ ಒಳಗೇ ಒಮ್ಮತ ಇಲ್ಲ. ಒಂದು ವರ್ಗ ಆದಿತ್ಯನಾಥ ಅವರ ಸ್ಪರ್ಧೆ ಬೇಡ ಎಂದರೆ, ಮತ್ತೊಂದು ವರ್ಗ ಅವರ ಸ್ಪರ್ಧೆಯಿಂದ ಪಕ್ಷಕ್ಕೆ ಒಳಿತಾಗುತ್ತದೆ ಎಂಬ ಅಭಿಪ್ರಾಯ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.